ಮುಂಬೈ,ನ.29(DaijiworldNews/TA): ನಗರದ ಗರ್ವಾರೆ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವನ್ನು ಆಡುತ್ತಿದ್ದಾಗ 35 ವರ್ಷದ ಕ್ರಿಕೆಟಿಗ ಇಮ್ರಾನ್ ಪಟೇಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಆಟಗಾರ ಇಮ್ರಾನ್ ಪಟೇಲ್ ಆರಂಭಿಕರಾಗಿ ಬ್ಯಾಟಿಂಗ್ಗೆ ಬಂದರು ಮತ್ತು ಪಿಚ್ನಲ್ಲಿ ಸ್ವಲ್ಪ ಸಮಯ ಕಳೆದ ನಂತರ ಎದೆ ಮತ್ತು ತೋಳಿನ ನೋವಿನ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು. ಅವರು ಈ ವಿಷಯವನ್ನು ಮೈದಾನದ ಅಂಪೈರ್ಗಳಿಗೆ ತಿಳಿಸಿ ಮೈದಾನದಿಂದ ಹೊರಹೋಗಲು ಅನುಮತಿ ನೀಡಲಾಯಿತು. ಆದರೆ, ಪೆವಿಲಿಯನ್ಗೆ ಹಿಂತಿರುಗುವಾಗ ಇಮ್ರಾನ್ ಕುಸಿದು ಬಿದ್ದರು.
ಪಂದ್ಯದ ನೇರಪ್ರಸಾರವಾಗುತ್ತಿದ್ದಂತೆ ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಮ್ರಾನ್ ಕುಸಿದು ಬೀಳುತ್ತಿದ್ದಂತೆ ಮೈದಾನದಲ್ಲಿದ್ದ ಇತರ ಆಟಗಾರರು ಅವರತ್ತ ಧಾವಿಸಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಪರೀಕ್ಷಿಸಿದ ಬಳಿಕ ಇಮ್ರಾನ್ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಇಮ್ರಾನ್ ಅವರು ತುಂಬಾ ಆರೋಗ್ಯವಾಗಿದ್ದರು, ಅವರು ದೈಹಿಕವಾಗಿ ಸದೃಢರಾಗಿದ್ದರು, ಅವರು ಹೃದಯ ಸ್ತಂಭನದಿಂದ ಮೃತಪಟ್ಟಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಇಮ್ರಾನ್ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.