ಮಲೇಷ್ಯಾ, ಜ.31 (DaijiworldNews/AA): ಅಂಡರ್-19 ಮಹಿಳಾ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾ 9 ವಿಕೆಟ್ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿದೆ. ಇದರೊಂದಿಗೆ ಭಾರತ ತಂಡ ಸತತ ಎರಡನೇ ಬಾರಿಗೆ ಈ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ.

ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಫೆಬ್ರವರಿ 2 ರಂದು ನಡೆಯಲಿದೆ.
ಇನ್ನು ಇಡೀ ಟೂರ್ನಿಯೂದ್ದಕ್ಕೂ ಭಾರತ ತಂಡವನ್ನು ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್ ಕೂಡ ಪ್ರಾರಂಭದಲ್ಲಿ ಉತ್ತಮ ಪ್ರದರ್ಶನ ನೀಡಿತು. ಆದರೆ ಇದಾದ ಬಳಿಕ ಭಾರತ ತಂಡದ ಬೌಲರ್ಗಳ ದಾಳಿಗೆ ಇಂಗ್ಲೆಂಡ್ ತಂಡವು ತತ್ತರಿಸಿದೆ.