ಮುಂಬೈ,ಫೆ.11 (DaijiworldNews/AK): ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಬುಧವಾರ (ಫೆ.12) ನಡೆಯಲಿದೆ.ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮೂರು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಮೂರನೇ ಪಂದ್ಯವು ಭಾರತದ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾ ಕೆಲ ಪ್ರಯೋಗಗಳನ್ನು ನಡೆಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಪಂದ್ಯದಲ್ಲಿ ಮೂರು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಬದಲಾವಣೆಗಳಾದ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ. ಕಳೆದ 2 ಮ್ಯಾಚ್ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಡಿರುವ ರಾಹುಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಪಂತ್ ಅವರನ್ನು ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಬಹುದು.ಹಾಗೆಯೇ ಮೊದಲೆರಡು ಮ್ಯಾಚ್ಗಳಲ್ಲಿ ಕಣಕ್ಕಿಳಿದರೂ ಮೊಹಮ್ಮದ್ ಶಮಿ ಪರಿಣಾಕಾರಿಯಾಗಿ ದಾಳಿ ಸಂಘಟಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಅವರ ಸ್ಥಾನದಲ್ಲಿ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ಸಾಧ್ಯತೆಯಿದೆ.
ರೋಹಿತ್ ಶರ್ಮಾ (ನಾಯಕ)
ಶುಭ್ಮನ್ ಗಿಲ್
ವಿರಾಟ್ ಕೊಹ್ಲಿ
ಶ್ರೇಯಸ್ ಅಯ್ಯರ್
ರಿಷಭ್ ಪಂತ್ (ವಿಕೆಟ್ ಕೀಪರ್)
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ
ಅಕ್ಷರ್ ಪಟೇಲ್
ಹರ್ಷಿತ್ ರಾಣಾ
ಅರ್ಷದೀಪ್ ಸಿಂಗ್
ಕುಲ್ದೀಪ್ ಯಾದವ್.