ಮುಂಬೈ, ಮಾ.31 (DaijiworldNews/AA): ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಬಿಸಿಸಿಐ ದಂಡ ವಿಧಿಸಿದ ಬೆನ್ನಲ್ಲೇ ಇದೀಗ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಅವರಿಗೂ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ಐಪಿಎಲ್ನ 18 ನೇ ಆವೃತ್ತಿಯ 11 ಪಂದ್ಯ ಸಿಎಸ್ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ರಾಜಸ್ಥಾನ ತಂಡ ಸಿಎಸ್ಕೆ ವಿರುದ್ಧ ಗೆಲುವು ಸಾಧಿಸಿತ್ತು. ಆದಾಗ್ಯೂ ರಾಜಸ್ಥಾನ್ ತಂಡದ ನಾಯಕ ರಿಯಾನ್ ಪರಾಗ್ಗೆ ಬಿಸಿಸಿಐ ಬರೋಬ್ಬರಿ 12 ಲಕ್ಷ ರೂ. ದಂಡ ವಿಧಿಸಿದೆ.
ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯಕ್ಕೆ ಓವರ್?ಗಳನ್ನು ಮುಗಿಸದ ಕಾರಣಕ್ಕಾಗಿ ರಿಯಾನ್ ಪರಾಗ್ಗೆ ಬಿಸಿಸಿಐ ಈ ದಂಡ ವಿಧಿಸಿದೆ. ಈ ದಂಡದ ಮೊತ್ತವನ್ನು ಪರಾಗ್ ಅವರ ಪಂದ್ಯ ಶುಲ್ಕದಲ್ಲಿ ಕಡಿತಗೊಳಿಸಲಾಗುತ್ತದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಪಂದ್ಯದ ವೇಳೆ ಬೌಂಡರಿ ಲೈನ್ನಿಂದ ಒರ್ವ ಫೀಲ್ಡರ್ನನ್ನು ಕಡಿತಗೊಳಿಸಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.