ಮುಂಬೈ, ಏ.04 (DaijiworldNews/AA): ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ವೇಗದ ಬೌಲರ್ ಕಗಿಸೊ ರಬಾಡ ಅವರು ವೈಯಕ್ತಿಕ ಕಾರಣಗಳಿಂದ ಐಪಿಎಲ್ ತೊರೆದು ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದು, ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವು ಸಾಧಿಸಿದ ಬಳಿಕ ಈ ಸುದ್ದಿ ಬಂದಿದ್ದು ತಂಡಕ್ಕೆ ದೊಡ್ಡ ಆಘಾತವಾಗಿದೆ.

ಈ ಸೀಸನ್ ನಲ್ಲಿ ಕಗಿಸೊ ರಬಾಡ ಕೇವಲ ಎರಡು ಪಂದ್ಯಗಳಲ್ಲಿ ಎರಡು ವಿಕೆಟ್ ಪಡೆದಿದ್ದಾರೆ. ಐಪಿಎಲ್ ತೊರೆದು ಮನೆಗೆ ವಾಪಸ್ಸಾಗಿರುವ ಅವರು ಮತ್ತೆ ಐಪಿಎಲ್ಗೆ ಹಿಂತಿರುಗುತ್ತಾರೋ ಇಲ್ಲವೋ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ.
ಕಗಿಸೊ ರಬಾಡ ಐಪಿಎಲ್ ತೊರೆದಿರುವ ಬಗ್ಗೆ ಮಾಹಿತಿ ನೀಡಿದ ಗುಜರಾತ್ ಟೈಟಾನ್ಸ್, ಕಾಗಿಸೊ ರಬಾಡ ವೈಯಕ್ತಿಕ ಕಾರಣದಿಂದಾಗಿ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದಾರೆ ಎಂದು ತಿಳಿಸಿದೆ.