ನವದೆಹಲಿ, ಮೇ. 26 (DaijiworldNews/TA): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ ದಾಖಲೆ ಬರೆದಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 230 ರನ್ ಕಲೆಹಾಕಿದೆ. 230 ರನ್ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಬಾರಿ 200+ ಸ್ಕೋರ್ಗಳಿಸಿದ ತಂಡವೆಂಬ ದಾಖಲೆ ಸಿಎಸ್ಕೆ ಪಾಲಾಗಿದೆ.
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. ಆರ್ಸಿಬಿ ತಂಡ ಈವರೆಗೆ 268 ಪಂದ್ಯಗಳನ್ನಾಡಿದ್ದು, ಈ ವೇಳೆ 33 ಬಾರಿ 200+ ಸ್ಕೋರ್ಗಳಿಸಿ ಐಪಿಎಲ್ನಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತಗಳಿಸಿದ ತಂಡ ಎಂದು ಎನಿಸಿಕೊಂಡಿದೆ.