ಮುಂಬೈ, ಮೇ. 29 (DaijiworldNews/AA): ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-೧೮ರ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ಗೆ 30 ಲಕ್ಷ ದಂಡ ವಿಧಿಸಲಾಗಿದೆ.

ಲಕ್ನೋನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಂತ್ಗೆ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದಕ್ಕೂ ಮುನ್ನ 2 ಬಾರಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದ ಪಂತ್, ಇದೀಗ ಮೂರನೇ ಬಾರಿ ಅದೇ ತಪ್ಪಿಗೆ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆ ದಂಡ ಪ್ರಮಾಣವನ್ನು 30 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಪಂತ್ ಒಟ್ಟು 36 ಲಕ್ಷ ರೂ. (12+24) ದಂಡ ಪಾವತಿಸಿದ್ದರು. ಇದೀಗ ಆರ್ಸಿಬಿ ವಿರುದ್ಧ ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಜೊತೆಗೆ ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿರುವ ಕಾರಣ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್ನ ಆಟಗಾರಿಗೂ ಬಿಸಿಸಿಐ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿದೆ.
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ, ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ಗೆ, ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ಗೆ, ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ಗೆ ತಲಾ 12 ಲಕ್ಷ ದಂಡ ವಿಧಿಲಾಗಿತ್ತು. ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ಗೆ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ಗೆ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ.