ಪರ್ತ್, ಅ. 19 (DaijiworldNews/AA): ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 7 ವಿಕೆಟ್ಗಳ ಜಯ ಸಾಧಿಸಿದೆ.

ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಪರ್ತ್ ಮೈದಾನದಲ್ಲಿ ನಡೆಯಿತು. ಆಸ್ಟ್ರೇಲಿಯಾ ತಂಡವು ಆತಿಥೇಯ ಭಾರತ ತಂಡ 7 ವಿಕೆಟ್ಗಳಿಂದ ಗೆದ್ದುಕೊಳ್ಳುವ ಮೂಲಕ ಟೂರ್ನಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ನಿರೀಕ್ಷೆಯಂತೆಯೇ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ ಪಂದ್ಯವನ್ನು ಸಾಕಷ್ಟು ಭಾರಿ ನಿಲ್ಲಿಸಬೇಕಾಯಿತು. ಇದರಿಂದಾಗಿ ಪಂದ್ಯವನ್ನು ತಲಾ 26 ಓವರ್ಗಳಿಗೆ ಇಳಿಸಲಾಯಿತು. ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 9 ವಿಕೆಟ್ಗಳ ನಷ್ಟಕ್ಕೆ 136 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ.