ಚೆನ್ನೈ, ಡಿ. 15 (DaijiworldNews/AA): ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಚೆನ್ನೈನ ಎಕ್ಸ್ಪ್ರೆಸ್ ಅವೆನ್ಯೂ ಮಾಲ್ನ ಕೋರ್ಟ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಹಾಂಗ್ ಕಾಂಗ್ ತಂಡವನ್ನು 3-1 ಅಂತರದಿಂದ ಸೋಲಿಸಿ ಭಾರತ ತಂಡವು ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ಸ್ಕ್ವಾಷ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಏಷ್ಯಾದ ಎರಡು ದೇಶಗಳು ಫೈನಲ್ನಲ್ಲಿ ಸ್ಪರ್ಧಿಸಿದ್ದು ಇದೇ ಮೊದಲು. ಹೀಗಾಗಿಯೇ ಭಾರತ ಹಾಗೂ ಹಾಂಗ್ ಕಾಂಗ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಲಾಗಿತ್ತು.
ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಜೋಶ್ನಾ ಚಿನಪ್ಪ ಹಾಂಗ್ ಕಾಂಗ್ನ ಕಾ ಯಿ ಲೀ ಅವರನ್ನು ಮಣಿಸಿದರು. ಇನ್ನು ದ್ವಿತೀಯ ಸುತ್ತಿನಲ್ಲಿ ಅಭಯ್ ಸಿಂಗ್ ಹಾಂಗ್ ಕಾಂಗ್ನ ಅಲೆಕ್ಸ್ ಲಾವ್ಗೆ ಸೋಲುಣಿಸಿದರು. ಅಂತಿಮ ಸುತ್ತಿನಲ್ಲಿ ಅನಾಹತ್ ಸಿಂಗ್ ಕಾಂಗ್ನ ಟೊಮ್ಯಾಟೊ ಹೊ ಅವರನ್ನು ಮಣಿಸಿದರು. ಈ ಮೂಲಕ ಭಾರತ ತಂಡವು ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್ನಲ್ಲಿ ಚಾಂಪಿಯನ್ ಆಗಿದೆ.