ಮುಂಬೈ, ,ಡಿ. 16 (DaijiworldNews/AK): ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ರಸ್ತುತ ಟಿ20 ಕ್ರಿಕೆಟ್ನಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಕಡಿಮೆ ಅವಧಿಯಲ್ಲೇ ಚುಟುಕು ಮಾದರಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದರ ಫಲವಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿಯೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ.

ಡಿಸೆಂಬರ್ 17 ರ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ವರುಣ್ ಚಕ್ರವರ್ತಿ ಮುಂದುವರೆದಿದ್ದಾರೆ. ರೇಟಿಂಗ್ನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಟಿ20 ಪಂದ್ಯಗಳಲ್ಲಿ ಚಕ್ರವರ್ತಿ ತಲಾ 2 ವಿಕೆಟ್ಗಳನ್ನು ಕಬಳಿಸಿದ್ದರು. ಇದರ ಫಲವಾಗಿ ಅವರಿಗೆ 36 ರೇಟಿಂಗ್ ಅಂಕಗಳು ಹೆಚ್ಚುವರಿಯಾಗಿ ಸಿಕ್ಕಿವೆ.
ಇದರಿಂದಾಗಿ 818 ರೇಟಿಂಗ್ ಪಾಯಿಂಟ್ ತಲುಪಿರುವ ವರುಣ್ ಚಕ್ರವರ್ತಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಟಿ20 ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ಗಳನ್ನು ಹೊಂದಿರುವ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ 818 ರೇಟಿಂಗ್ ಪಾಯಿಂಟ್ಗಳೊಂದಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.