ಮುಂಬೈ, ಮಾ. 05 (DaijiworldNews/AA): ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7 ರನ್ಗಳ ಅಂತರದಿಂದ ಮಣಿಸಿ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ಗೇರಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಕಲೆ ಹಾಕಿತು.
ಭಾರತ ಬೃಹತ್ ರನ್ಗಳ ಗುರಿ ನೀಡಿದ್ದರಿಂದ ಇಂಗ್ಲೆಂಡ್ ಸುಲಭವಾಗಿ ಸೋಲುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಇಂಗ್ಲೆಂಡ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್ಗಳಲ್ಲಿ ಭಾರತದ ಬೌಲರ್ಗಳು ಪಂದ್ಯದ ದಿಕ್ಕು ಬದಲಿಸಿ ತಂಡದ ಗೆಲುವಿಗೆ ಕಾರಣರಾದರು.