ಮುಂಬೈ, ಮಾ. 06 (DaijiworldNews/AK): ವಾಂಖೆಡೆ ಸ್ಟೇಡಿಯಂನಲ್ಲಿನ ನಡೆದ ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೇಕಬ್ ಬೆಥೆಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಶತಕದೊಂದಿಗೆ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೇಕಬ್ ಬೆಥೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಈ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಬೆಥೆಲ್ ಕೇವಲ 45 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಶತಕದೊಂದಿಗೆ ಜೇಕಬ್ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮೂಲಕ ಮೂರು ಸ್ವರೂಪಗಳಲ್ಲೂ ಸೆಂಚುರಿ ಖಾತೆ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಂದರೆ ಬೆಥೆಲ್ ದೇಶೀಯ ಅಂಗಳದಲ್ಲಿ ಶತಕ ಬಾರಿಸುವ ಮುನ್ನವೇ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಸೆಂಚುರಿ ಸಿಡಿಸಿದ್ದಾರೆ.
2025 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ಜೇಕಬ್ ಬೆಥೆಲ್ ಶತಕದ ಖಾತೆ ತೆರೆದಿದ್ದರು. ಇದೀಗ ಟೀಮ್ ಇಂಡಿಯಾ ವಿರುದ್ಧ ಟಿ20 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ ಮೂಲಕ ಮೂರು ಸ್ವರೂಪಗಳಲ್ಲೂ ಶತಕದ ಖಾತೆ ತೆರೆದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಜೇಕಬ್ ಬೆಥೆಲ್ ತಮ್ಮದಾಗಿಸಿಕೊಂಡಿದ್ದಾರೆ.