ಅಹಮದಾಬಾದ್,ಮಾ. 07 (DaijiworldNews/ AK): 2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯ ಮಾರ್ಚ್ 8 ರ ಭಾನುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾಯುತ್ತಿದ್ದಾರೆ. ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಫೈನಲ್ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಈ ಫೈನಲ್ ಪಂದ್ಯದ ಮತ್ತೊಂದು ವಿಶೇಷತೆ ಏನೆಂದರೆ ಭಾರತ ಹಾಗೂ ಕಿವೀಸ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಯಾವ ತಂಡ ಫೈನಲ್ ಕಾಳಗದಲ್ಲಿ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.