ಅಹಮದಾಬಾದ್, ಮಾ. 08 (DaijiworldNews/AA): ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2026 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಕಳೆದ ಕೆಲ ವಾರಗಳಿಂದ ನಡೆಯುತ್ತಿರುವ 2026 ಟಿ20 ವಿಶ್ವಕಪ್ ಇಂದು ಮುಕ್ತಾಯವಾಗಲಿದೆ. ಈ ಪಂದ್ಯಕ್ಕಾಗಿ ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಕೆಲ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಾಯಕರುಗಳು ಮನರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಅಹಮದಾಬಾದ್ನ ಸ್ಟೇಡಿಯಂನಲ್ಲಿ ಬ್ಯಾಟಿಂಗ್ಗೆ ಪೂರಕವಾಗಿರುವ ಪಿಚ್ ನಿರ್ಮಿಸಲಾಗಿದೆ. ಹೀಗಾಗಿ ಈ ಮ್ಯಾಚ್ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದಾಗಿದೆ. ಈ ಪಂದ್ಯಕ್ಕಾಗಿ ಅಹಮದಾಬಾದ್ನ ಮೈದಾನದ 6ನೇ ಪಿಚ್ ಅನ್ನು ಬಳಸಲಾಗುತ್ತಿದೆ. ಈ ಪಿಚ್ ಅನ್ನು ಕೆಂಪು ಮತ್ತು ಕಪ್ಪು ಮಣ್ಣಿನ ಮಿಶ್ರಣದಿಂದ ನಿರ್ಮಿಸಲಾಗಿದೆ.