ಅಹ್ಮದಾಬಾದ್,ಮಾ. 09 (DaijiworldNews/TA): ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶನ್ ಕಿಶನ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಅಹ್ಮದಾಬಾದ್ ನಲ್ಲಿ ನಡೆದ ವಿಶ್ವಕಪ್ ಟಿ-20 ಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 96 ರನ್ ಗಳ ಗೆಲುವು ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ-20 ವಿಶ್ವಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತ ಪರ ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶನ್ ಕಿಶನ್ ವೇಗದ ಅರ್ಧಶತಕ ಸಿಡಿಸಿ ಮಿಂಚಿದರು. ಅಂತಿಮ ಹಂತದಲ್ಲಿ ಶಿವಂ ಧುಬೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಗಳ ಮೊತ್ತ ಪೇರಿಸಿತು. ಕಿವೀಸ್ ಪರ ಜಿಮಿ ನೀಶಮ್ ಮೂರು ವಿಕೆಟ್ ಪಡೆದರು. ಇನ್ನು ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು.
ಅಂತಿಮವಾಗಿ ನ್ಯೂಜಿಲ್ಯಾಂಡ್ 19 ಓವರ್ ಗಳಲ್ಲಿ 159 ರನ್ ಗಳಿಗೆ ಸರ್ವಪತನ ಕಂಡಿತು. ಭಾರತ ಪರ ಜಸ್ ಪ್ರೀತ್ ಬುಮ್ರಾ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಒಟ್ಟಾರೆಯಾಗಿ ಭಾರತ ಮೂರನೇ ಬಾರಿಗೆ ಟಿ-20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತು. 2007 ಹಾಗೂ 2024 ರಲ್ಲಿ ಪ್ರಶಸ್ತಿ ಮುಡಿಗೇರಿಸಿದ್ದ ಭಾರತ ಇದೀಗ ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು. ಭಾರತದ ಗೆಲುವಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.