ಕೊಲ್ಕತ್ತಾ, ಏ. 20 (DaijiworldNews/AA): 2026ರ ಐಪಿಎಲ್ನ 29ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿದೆ. ಈ ಸೋಲಿನ ಬೆನ್ನಲ್ಲೇ ಆರ್ಆರ್ನ ಆಟಗಾರ ವೈಭವ್ ಸೂರ್ಯವಂಶಿ ಭಾವುಕರಾಗಿ ಕಣ್ಣೀರಿಟ್ಟಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ 19.4 ಓವರ್ಗಳಲ್ಲಿ 161 ರನ್ಗಳಿಸಿ 4 ವಿಕೆಟ್ಗಳ ಜಯ ಸಾಧಿಸಿತು.
ಒಂದೆಡೆ ಕೆಕೆಆರ್ ಆಟಗಾರರು ಗೆದ್ದ ಖುಷಿಯಲ್ಲಿದ್ದರೆ, ಇನ್ನೊಂದೆಡೆ ಸೋತ ನೋವಿನಲ್ಲಿ ವೈಭವ್ ಸೂರ್ಯವಂಶಿ ಕಣ್ಣೀರಿಟ್ಟರು. ಇದೀಗ ವೈಭವ್ ಸೂರ್ಯವಂಶಿ ಕಣ್ಣೀರಿಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮನಮಿಡಿದಿದ್ದಾರೆ.