ಬೆಂಗಳೂರು, ಏ. 25 (DaijiworldNews/AK): ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರುವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋಲಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್ಸಿಬಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ.
ಈ ಸೋಲಿನ ಬಳಿಕ ಮಾತನಾಡಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್, ನಿರ್ಣಾಯಕ ಹಂತದಲ್ಲಿ ಬೌಂಡರಿಗಳನ್ನು ಬಾರಿಸಲು ವಿಫಲರಾದದ್ದು ಮತ್ತು ಮಧ್ಯಂತರ ಓವರ್ಗಳಲ್ಲಿ ವಿಕೆಟ್ ಪಡೆಯದಿದ್ದದ್ದು ಸೋಲಿಗೆ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮ ಬ್ಯಾಟರ್ಗಳಿಗೆ 16 ರಿಂದ 19ನೇ ಓವರ್ಗಳ ನಡುವೆ ನಾವು ಒಂದೂ ಬೌಂಡರಿ ಬಾರಿಸಲು ಸಾಧ್ಯವಾಗಲಿಲ್ಲ. ಈ ಮೂರು ಓವರ್ಗಳಲ್ಲಿ ನಾವು ನಿರೀಕ್ಷಿತ ರನ್ ಗಳಿಸಲಿಲ್ಲ, ಇದು ನಮ್ಮ ಪಾಲಿಗೆ ಬಹಳ ನಿರ್ಣಾಯಕವಾಯಿತು. ಪವರ್ಪ್ಲೇ ಅಂತ್ಯಕ್ಕೆ ನಾವು ಉತ್ತಮ ಸ್ಥಿತಿಯಲ್ಲಿದ್ದೆವು, ಆದರೆ ಅಂತಿಮ ಹಂತದಲ್ಲಿ ಲಯ ತಪ್ಪಿದೆವು. ಈ ಮೂರು ಓವರ್ಗಳಲ್ಲಿ ಒಂದೇ ಒಂದು ಬೌಂಡರಿ ಬಾರಿಸದೇ ಇರುವುದು ಸೋಲಿಗೆ ಕಾರಣವಾಯ್ತು ಎಂದು ಶುಭ್ಮನ್ ಗಿಲ್ ಹೇಳಿದ್ದಾರೆ.
ಸದ್ಯ ಮೊದಲಾರ್ಧ ಮುಗಿಸಿರುವ ಗುಜರಾತ್ ಟೈಟಾನ್ಸ್ ತಂಡವು 3 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ದ್ವಿತೀಯಾರ್ಧದಲ್ಲಿ ಕನಿಷ್ಠ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಮಾತ್ರ ಗುಜರಾತ್ ಟೈಟಾನ್ಸ್ ತಂಡವು ನೇರವಾಗಿ ಪ್ಲೇಆಫ್ಗೇರಬಹುದು.