ಮುಂಬೈ, ಆ. 14 (DaijiworldNews/AA): ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಿರುವ ಚಿನ್ಸುರಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಅಭಿಷೇಕ್ ಪೊರೆಲ್ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆಗೆ ಲೈಂಗಿಕ ಸಂಬಂಧ ಹೊಂದಿದ್ದು ಮಾತ್ರವಲ್ಲದೆ, ಆ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿದೆ. ಈ ಆರೋಪದ ಮೇರೆಗೆ ಅವರನ್ನು ಆಗಸ್ಟ್ 11 ರಂದು ಪೊಲೀಸರು ಬಂಧಿಸಿದ್ದರು.
ಈ ಮೊದಲು ಅಭಿಷೇಕ್ ಪೊರೆಲ್ ಅವರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಆದರೀಗ ಚಿನ್ಸುರಾ ನ್ಯಾಯಾಲಯ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ವರದಿಯಾಗಿದೆ.
ಅಭಿಷೇಕ್ ಪೊರೆಲ್ ಮತ್ತು ಆರೋಪ ಮಾಡಿರುವ ವಿದ್ಯಾರ್ಥಿನಿ ಮೂರು ವರ್ಷಗಳಿಂದ ಜೊತೆಯಲ್ಲಿದ್ದರು. ಇಬ್ಬರು ಒಟ್ಟಿಗೆ ವಿದೇಶ ಪ್ರವಾಸ ಕೂಡ ಮಾಡಿದ್ದು, ಮದುವೆಯಾಗಲು ಸಹ ಯೋಜಿಸಿದ್ದರು. ಆದರೆ ಸುಮಾರು 18 ತಿಂಗಳ ಹಿಂದೆ ಇಬ್ಬರ ನಡುವೆ ಜಗಳವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದರೆ ಆ ಸಮಯದಲ್ಲಿ ಅಭಿಷೇಕ್ರನ್ನು ಬಂಧಿಸಿರಲಿಲ್ಲ. ಹೀಗಾಗಿ ಯುವತಿ, ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ನಂತರ ನ್ಯಾಯಾಲಯವು ಅಭಿಷೇಕ್ ಅವರನ್ನು ತಕ್ಷಣವೇ ಬಂಧಿಸುವಂತೆ ಪೊಲೀಸರಿಗೆ ಆದೇಶ ಹೊರಡಿಸಿತ್ತು.