ಮುಂಬೈ, ಆ. 22 (DaijiworldNews/ AK): ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ಗೆ ಟೀಂ ಇಂಡಿಯಾ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯ ಭಾನುವಾರ ಆಗಸ್ಟ್ 23 ರಿಂದ ಕೊಲಂಬೊದಲ್ಲಿ ಆರಂಭವಾಗಲಿದೆ.

ಮೊದಲ ಟೆಸ್ಟ್ನಲ್ಲಿ ಸುಲಭ ಜಯ ದಾಖಲಿಸಿದ್ದ ಟೀಂ ಇಂಡಿಯಾ ಇದೀಗ ಎರಡನೇ ಟೆಸ್ಟ್ ಗೆದ್ದು ಸರಣಿ ವಶಪಡಿಸಿಕೊಳ್ಳುವುದರ ಜೊತೆಗೆ ಡಬ್ಲ್ಯೂಟಿಸಿ ಫೈನಲ್ ರೇಸ್ನಲ್ಲಿ ಜೀವಂತವಾಗಿರಲು ಪ್ರಯತ್ನಿಸಲಿದೆ. ಆದರೆ ಆ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಪತ್ರಕರ್ತರ ಪ್ರಶ್ನೆಗಳಿಗೆ ನೇರ ಉತ್ತರ ನೀಡಿದರು.
ಮೊದಲಿಗೆ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾ 5ನೇ ಸ್ಥಾನದಲ್ಲಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ಕ್ರಿಕೆಟ್ನಲ್ಲಿ ನಾವು ಹೇಗೆ ಮುಂದುವರಿಯಲು ಬಯಸುತ್ತೇವೆ, ಅದಕ್ಕೆ ಏನು ಬೇಕು ಮತ್ತು ಕ್ರಿಕೆಟ್ನ ಸುಧಾರಣೆಗೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆಯೇ ಎಂಬುದು ಮುಖ್ಯವಾಗಿದೆ?. ಆದ್ದರಿಂದ ನಮಗೆ ಶ್ರೇಯಾಂಕಗಳ ಬಗ್ಗೆ ಕಾಳಜಿ ಇಲ್ಲ. ಕಳೆದ ಇಂಗ್ಲೆಂಡ್ ಪ್ರವಾಸದಿಂದಲೂ ನಾವು ಉತ್ತಮ ಟೆಸ್ಟ್ ಕ್ರಿಕೆಟ್ ಆಡುತ್ತಿದ್ದೇವೆ. ಮುಖ್ಯ ತರಬೇತುದಾರನಾಗಿ ನನ್ನ ಕೆಲಸ ಟ್ರೋಫಿಗಳನ್ನು ಗೆಲ್ಲುವುದು. ನಾನು ನಂಬುವುದು ಅದನ್ನೇ. ನಾನು ಯೋಚಿಸುವುದು ಅದನ್ನೇ. ಇದೇ ನನ್ನ ಮತ್ತು ಇತರರ ನಡುವಿನ ವ್ಯತ್ಯಾಸ. ನಾನು ವ್ಯೂವ್ಸ್ ಮತ್ತು ಲೈಕ್ಸ್ಗಳನ್ನು ನಂಬುವುದಿಲ್ಲ’ ಎಂದಿದ್ದಾರೆ.