ದುಬೈ, ಸೆ. 11 (DaijiworldNews/AK): 2026 ರ ಮಹಿಳಾ ಟಿ20 ಏಷ್ಯಾಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಿದ್ದ ಟೀಂ ಇಂಡಿಯಾ ಸುಲಭ ಗೆಲುವು ದಾಖಲಿಸುವ ಮೂಲಕ ಅಜೇಯ ತಂಡವಾಗಿ ಫೈನಲ್ಗೆ ಪ್ರವೇಶಿಸಿದೆ.

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳನ್ನು ಕಳೆದುಕೊಂಡು 149 ರನ್ ಕಲೆಹಾಕಿತು. ಈ ಗೆಲುವಿನೊಂದಿಗೆ ಭಾರತೀಯ ಮಹಿಳಾ ತಂಡ 10ನೇ ಬಾರಿಗೆ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. 2004, 2005–06, 2006, 2008, 2012, 2016, 2018, 2022 ಹಾಗೂ 2024ರ ಬಳಿಕ 10ನೇ ಬಾರಿಗೆ ಫೈನಲ್ ತಲುಪಿದೆ.
ಈವರೆಗೆ ಭಾರತ ವನಿತೆಯರ ತಂಡ 7 ಬಾರಿ (2004, 2005–06, 2006, 2008, 2012, 2016 ಮತ್ತು 2022) ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 2 ಬಾರಿ (2018, 2024) ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಇದೀಗ 10ನೇ ಬಾರಿ ಫೈನಲ್ ತಲುಪಿದ್ದು, 8ನೇ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ.