ಚೀನಾ, ಮೇ 06 (DaijiworldNews/MS): ಈ ವರ್ಷದ ಸೆಪ್ಟೆಂಬರ್ನಲ್ಲಿ ಹ್ಯಾಂಗ್ಝೌನಲ್ಲಿ ನಡೆಯಬೇಕಿದ್ದ 2022 ರ ಏಷ್ಯನ್ ಗೇಮ್ಸ್ ಅನ್ನು ಅನಿರ್ದಿಷ್ಟ ದಿನಾಂಕಕ್ಕೆ ಮುಂದೂಡಲಾಗಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾವನ್ನು ಉಲ್ಲೇಖಿಸಿ ಚೀನಾದ ಸರ್ಕಾರಿ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
2022 ರ ಸೆಪ್ಟೆಂಬರ್ 10 ರಿಂದ 25 ರವರೆಗೆ ಚೀನಾದ ಹ್ಯಾಂಗ್ಝೌನಲ್ಲಿ ನಡೆಯಬೇಕಿದ್ದ 19 ನೇ ಏಷ್ಯನ್ ಕ್ರೀಡಾಕೂಟವನ್ನು ಮುಂದೂಡಲಾಗುವುದು ಎಂದು ಏಷ್ಯಾದ ಒಲಿಂಪಿಕ್ ಕೌನ್ಸಿಲ್ ಘೋಷಿಸಿದೆ ಎಂದು ವರದಿ ತಿಳಿಸಿದೆ.
ವಿಳಂಬಕ್ಕೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಆದರೆ ಚೀನಾ ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆ ಈ ವಿಶೇಷ ಘೋಷಣೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.
ಕ್ರೀಡಾ ಸ್ಪರ್ಧೆಯ ಹೊಸ ದಿನಾಂಕಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು" ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.ಚೀನಾ ಈ ಹಿಂದೆ 2010 ರಲ್ಲಿ ಗುವಾಂಗ್ಝೌನಲ್ಲಿ ಏಷ್ಯನ್ ಕ್ರೀಡಾಕೂಟವನ್ನು ಆಯೋಜಿಸಿತ್ತು.