ಬೆಂಗಳೂರು, ಮೇ 17 (DaijiworldNews/HR): ಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಇತಿಹಾಸದಲ್ಲೇ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ನೀಡಲಾಗುವುದು ಎಂದರು.
ಇನ್ನು ಥಾಮಸ್ ಕಪ್ ಮುಡಿಗೇರಿಸಿಕೊಂಡ ಭಾರತದ ತಂಡದಲ್ಲಿ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋರ್ಟ್ಸ್ ಸೆಂಟರ್ನಲ್ಲಿ ತರಬೇತಿ ಪಡೆಯುತ್ತಿರುವ ಲಕ್ಷ್ಯ ಸೇನ್ ಕೂಡ ಒಬ್ಬರಾಗಿದ್ದಾರೆ.