ನವದೆಹಲಿ, ಮೇ 22 (DaijiworldNews/SM): ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಪಂದ್ಯಕ್ಕೆ ಕೆ.ಎಲ್. ರಾಹುಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಈಗಾಗಲೇ ಕೊಹ್ಲಿ ಅವರು ನಾಯಕತ್ವಕ್ಕೆ ಗುಡ್ ಬೈ ಹೇಳಿದ ಬಳಿಕ ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಇವರಿಬ್ಬರಿಗೂ ಈ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ.
ತಂಡಕ್ಕೆ ಹಿರಿಯ ಆಟಗಾರ ಶಿಖರ್ ಧವನ್ ಕಮ್ ಬ್ಯಾಕ್ ಮಾಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಯುವ ವೇಗಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನಪಡೆದಿದ್ದು, ಅರ್ಷ್ದೀಪ್ ಸಿಂಗ್ ಕೂಡ ಟಿ-20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.