ಬೆಂಗಳೂರು, ಜು 19 (DaijiworldNews/MS): ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕಂಬ್ಯಾಕ್ ಮಾಡಲು ಭರ್ಜರಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಇದಕ್ಕಾಗಿ ಫಿಟ್ನೆಸ್ ಸಾಧಿಸಲು ಕೆಲ ದಿನಗಳಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಇತ್ತೀಚೆಗೆ ತಾನೇ ಅವರು ಜರ್ಮನಿಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದು ಮತ್ತೆ ತಂಡ ಸೇರಲು ಕಠಿಣ ಪರಿಶ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ.
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ರಾಹುಲ್ ಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರು ಬೌಲಿಂಗ್ ಕೆಎಲ್ಆರ್ ಡ್ರೈವ್ ಮತ್ತು ಕಟ್ ಶಾಟ್ಗಳನ್ನು ಆಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
ಜೂಲನ್ ಗೋಸ್ವಾಮಿ ಅವರ ಹೆಸರಲ್ಲಿ ಮಹಿಳೆಯರ ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಪಡೆದಿದ್ದಾರೆ.