ಮುಂಬೈ, ಜು 26 (DaijiworldNews/DB): ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ನಲ್ಲಿ ಕಳೆದೆರಡು ದಿನಗಳ ಹಿಂದಷ್ಟೇ ಬೆಳ್ಳಿ ಪದಕ ಗೆದ್ದಿದ್ದ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ಮುಂಬರುವ ಕಾಮನ್ವೆಲ್ತ್ ಕೂಟದಿಂದ ಹಿಂದೆ ಸರಿದಿದ್ದಾರೆ.
ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯದ ವೇಳೆ ನೀರಜ್ ತೊಡೆ ಸಂದು ಗಾಯಕ್ಕೆ ಒಳಗಾಗಿದ್ದರು. ಇದನ್ನು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಪದಾಧಿಕಾರಿಗಳಲ್ಲಿ ಹೇಳಿಕೊಂಡಿದ್ದು, ಬಳಿಕ ಗಾಯದ ಬಗ್ಗೆ ಬಹಿರಂಗವಾಗಿಯೂ ತಿಳಿಸಿದ್ದರು. ಗಾಯದ ಕಾರಣದಿಂದಾಗಿ ಅವರು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಕೂಟದಲ್ಲಿ ಆಡುತ್ತಿಲ್ಲ. ಶೀಘ್ರ ಅವರು ಚೇತರಿಸಿಕೊಳ್ಳಲಿ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದೆ.
2003ರಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದ ನಂತರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ನೀರಜ್ ಚೋಪ್ರಾ.