ಮೊಹಾಲಿ, ಸೆ 20 (DaijiworldNews/SM): ಇಲ್ಲಿನ ಪಂಜಾಬ್ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ ಅಬ್ಬರ ಆಟ ಪ್ರದರ್ಶಿಸಲು ವಿಫಲರಾದರು. ಕನ್ನಡಿಗ ರಾಹುಲ್ 55, ಸೂರ್ಯಕುಮಾರ್ ಯಾದವ್ 46, ಹರ್ದಿಕ್ ಪಾಂಡ್ಯ 71 ರನ್ ಸಿಡಿಸಿದರು.
ಇನ್ನು ಟೀಂ ಇಂಡಿಯಾ ನೀಡಿದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 19.2 ಓವರ್ ಗಳಲ್ಲಿ ಆರು ವಿಕೆಟ್ ಗಳ ನಷ್ಟಕ್ಕೆ 211 ರನ್ ಗಳಿಸಿ ಗೆಲುವಿನ ನಗೆ ಚೆಲ್ಲಿತು. ಕ್ಯಾಮರನ್ ಗ್ರೀನ್ 61, ಸ್ಟೀವನ್ ಸ್ಮಿತ್ 35, ಮ್ಯಾಥ್ಯೂ ವಡೆ 45 ರನ್ ಗಳಿಸಿದರು.