ಮಧ್ಯಪ್ರದೇಶ, ಸೆ 23 (DaijiworldNews/DB): ಮಧ್ಯಪ್ರದೇಶದ ಇಂಧೋರ್ ದಾವ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂಯುಕ್ತ ಭಾರತೀಯ ಖೇಲ್ ಫೌಂಡೇಶನ್ನ 7ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಂಗಳೂರಿನ ಉರ್ವಾದ ಅಂಗನವಾಡಿ ಕಾರ್ಯಕರ್ತೆ ಶಾಂತಕುಮಾರಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಆರು ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಅವರು, ಉದ್ದ ಜಿಗಿತ, ಎತ್ತರ ಜಿಗಿತ, ಟ್ರಿಪಲ್ ಜಂಪ್, ಯೋಗ, ಈಟಿ ಎಸೆತ ಮತ್ತು ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ ಗಳಿಸಿ ಆರು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.