ಪರ್ತ್, ಅ 25 (daijiworldNews/SM): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಏಳು ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ.
ಪರ್ತ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಬಾರಿಸಿತ್ತು. ಲಂಕಾ ನೀಡಿದ 158 ರನ್ ಗಳ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನು 21 ಎಸೆತ ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 158 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.
ಲಂಕಾ ಪರ ನಿಸಾಂಕಾ 40, ಧನಂಜಯ ಡಿಸಿಲ್ವಾ 26, ಅಸ್ಲಾಂಕಾ ಅಜೇಯ 38 ರನ್ ಬಾರಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 11, ಅರೋನ್ ಫಿಂಚ್ 31, ಮಾರ್ಷ್ 18, ಗ್ಲೇನ್ ಮ್ಯಾಕ್ಸ್ ವೆಲ್ 23 ಹಾಗೂ ಸ್ಟೋಯ್ನಿಸ್ ಅಜೇಯ 59 ರನ್ ಬಾರಿಸಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ ನ ಗ್ರೂಪ್ 1 ಪಟ್ಟಿಯಲ್ಲಿ ಒಂದು ಪಂದ್ಯ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಲ್ಲಿದೆ.