ಅಡಿಲೇಡ್, ನ 10 (DaijiworldNews/DB): ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದ್ದು, ಆಂಗ್ಲ ಕಲಿಗಳು ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.
ಅಡಿಲೇಡ್ನ ಓವಲ್ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಭಾರತದ ವಿರುದ್ದ 10 ವಿಕೆಟ್ ಅಂತರದ ಜಯ ಸಾಧಿಸಿ ಫೈನಲ್ಗೆ ಎಂಟ್ರಿಕೊಟ್ಟಿದೆ.
ಟಾಸ್ ಸೋತರೂ
ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಆದರೆ ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ ಆರಂಭಿಕ ಆಟಗಾರರಾದ ಜಾಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನ ಭಾರತ ತಂಡವನ್ನು ಸೋಲಿಸುವಲ್ಲಿ ಕಾರಣವಾಯಿತು. ಇನ್ನೂ 24 ಎಸೆತಗಳು ಬಾಕಿ ಇರುವಂತೆಯೇ ಈ ಇಬ್ಬರು ಆಟಗಾರರು ಜಯದ ಬೆನ್ನತ್ತಿದರು. ಹೇಲ್ಸ್ 47 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 89 ರನ್ ಗಳಿಸಿದರೆ, ಬಟ್ಲರ್ 49 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿ ಸಹಿತ ರನ್ ಪಡೆದರು.
ಮೆಲ್ಬರ್ನ್ನಲ್ಲಿ ನವೆಂಬರ್ 13ರಂದು ಟಿ20 ವಿಶ್ವಕಪ್ನ ಅಂತಿಮ ಹಣಾಹಣಿ ನಡೆಯಲಿದ್ದು, ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ಸೆಣಸಾಟ ನಡೆಯಲಿದೆ.