ವಿಶಾಖಪಟ್ಟಣಂ,ಫೆ 4 (DaijiworldNews/SK): ಕಳೆದ ಕೆಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದ ಟೀಮ್ ಇಂಡಿಯಾದ ಯುವ ಆಟಗಾರ ಶುಭ್ಮನ್ ಗಿಲ್ ವೈಜಾಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮತ್ತೇ ಫಾರ್ಮ್ ಗೆ ಮರಳಿದ್ದಾರೆ.
![](https://daijiworld.ap-south-1.linodeobjects.com/Linode/img_tv247/SK-040224-cri.jpg)
ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 2ನೇ ಟೆಸ್ಟ್ನ 3ನೇ ದಿನದಲ್ಲಿ ಶುಭ್ಮನ್ ಗಿಲ್ 132 ಎಸೆತಗಳನ್ನು ಎದುರಿಸಿ 11 ಬೌಂಡರಿ 2 ಸಿಕ್ಸರ್ ಸಹಿತ ಸೆಂಚುರಿ ಸಿಡಿಸಿದರು. ಈ ಮೂಲಕ ತಮ್ಮ ಟೆಸ್ಟ್ ವೃತ್ತಿ ಜೀವನದ 3ನೇ ಶತಕವನ್ನು ಸಿಡಿಸಿ ಬ್ಯಾಟ್ ಎತ್ತಿ ಗಿಲ್ ಸಂಭ್ರಮಿಸಿದರು.
ಇನ್ನು ಈ ಟೆಸ್ಟ್ ಪಂದ್ಯಾಟದಲ್ಲಿ ಶುಭ್ಮನ್ ಗಿಲ್ಗೆ ಆಲ್ರೌಂಡರ್ ಅಕ್ಷರ್ ಪಟೇಲ್ ಸಾಥ್ ನೀಡುತ್ತಿದ್ದಾರೆ. 4 ವಿಕೆಟ್ ಕಳೆದುಕೊಂಡಿರುವ ಟೀಮ್ ಇಂಡಿಯಾ 205 ರನ್ ಗಳಿಸಿ ಬೃಹತ್ ಮೊತ್ತದತ್ತ ಹೆಜ್ಜೆಯನ್ನು ಇಡುತ್ತಿದೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಭಾರತ ತಂಡವು 348 ರನ್ಗಳ ಮುನ್ನಡೆಯನ್ನು ಸಾಧಿಸಿದೆ ಎಂದು ತಿಳಿದು ಬಂದಿದೆ.