ಬೆಂಗಳೂರು,ಮೇ26(DaijiworldNews/AZM): ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಈ ಬಾರಿಯ ಆರ್ಯಭಟ ಪ್ರಶಸ್ತಿ ಲಭಿಸಿದ್ದು,ಮೇ.30ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಹಾಸ್ಯ ನಟ ಸಾಧು ಕೋಕಿಲ, ನಟಿ ಸುಧಾರಾಣಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಾಧನೆಗಾಗಿ ಡಿಆರ್ಡಿಒ ವಿಜ್ಞಾನಿ ಡಾ.ಎನ್. ಪ್ರಭಾಕರನ್ ಸೇರಿದಂತೆ 57 ಸಾಧಕರಿಗೆ ಈ ಬಾರಿಯ ಆರ್ಯಭಟ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿಯನ್ನು ಇದೇ ಮೇ.30ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ವಿತರಿಸಲಾಗುತ್ತದೆ ಎಂದು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಎಲ್.ಎನ್.ರಾವ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಎಲ್.ಎನ್.ರಾವ್, ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ನೀಡುವ ಪ್ರಶಸ್ತಿಗೆ ರಾಷ್ಟ್ರವಲ್ಲದೇ ಅಮೇರಿಕಾ, ದುಬೈ, ಕತಾರ್, ಸಿಂಗಾಪುರ, ಮಲೇಷಿಯಾ, ಆಸ್ಟ್ರೇಲಿಯಾ, ಕುವೈತ್, ಅಬುದಾಬಿ ಸೇರಿದಂತೆ ವಿವಿಧ ರಾಷ್ಟ್ರಗಳ 57 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.