ಬೆಂಗಳೂರು, ನ.28(DaijiworldNews/AK):ಕಿರು ತೆರೆ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ.
ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು.
ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ. ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.