ಮುಂಬೈ, ನ.29(DaijiworldNews/AA): ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಹಾಗೂ ಇನ್ನೂ ಕೆಲವರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಮುಂದುವರೆದಿದೆ.
ಈ ಹಿಂದೆಯೂ ರಾಜ್ ಕುಂದ್ರಾ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 2024ರ ಏಪ್ರಿಲ್ ತಿಂಗಳಲ್ಲಿ ಇಡಿ ಇಲಾಖೆ ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿತು. ಇನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ ಜುಹುವಿನ ಐಶಾರಾಮಿ ಮನೆ, ಪುಣೆಯ ಮನೆ ಹಾಗೂ ಕೆಲವು ಈಕ್ವಿಟಿ ಷೇರುಗಳು ಕೂಡ ಇದ್ದವು.
6,600 ಕೋಟಿ ಮೌಲ್ಯದ ಬಿಟ್ ಕಾಯ್ನ್ ಹಗರಣಕ್ಕೆ ಸಂಬಂಧಪಟ್ಟಂತೆ ಏಪ್ರಿಲ್ ತಿಂಗಳಲ್ಲಿ ರಾಜ್ ಕುಂದ್ರಾ ಮೇಲೆ ದಾಳಿ ನಡೆಸಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ರಾಜ್ ಕುಂದ್ರಾ ಮೇಲೆ ದಾಳಿ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.