ಬೆಂಗಳೂರು, ಡಿ.01 (DaijiworldNews/TA): ತುಳು ಸಿನಿಮಾ ‘ಜೀಟಿಗೆ’ ಹೆಸರಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿದ್ದ ಅರುಣ್ ರೈ ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಮೂಲದ ಉದ್ಯಮಿಯೊಬ್ಬರನ್ನು ಬೆಂಗಳೂರಿನ ತಾಜ್ ಹೋಟೆಲ್ನಲ್ಲಿ ಪರಿಚಯ ಮಾಡಿಕೊಂಡಿದ್ದ ನಿರ್ಮಾಪಕ ಅರುಣ್ ರೈ, ತಾನು ‘ವೀರಕಂಬಳ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು ಅದರ ಲಾಭಾಂಶದಲ್ಲಿ 60 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿ ಹಣ ಪಡೆದುಕೊಂಡಿದ್ದಾನೆ ಎನ್ನಲಾಗಿದೆ.
ಬೆಂಗಳೂರಿನ ಹಲವು ಕಂಪನಿ ಹಾಗೂ ಕಟ್ಟಡಗಳನ್ನ ತೋರಿಸಿ ಇದೆಲ್ಲವೂ ತನ್ನದೇ ಎಂದು ಹೇಳಿದ್ದ ನಿರ್ಮಾಪಕರ ಅರುಣ್, ಎಲೆಕ್ಟ್ರಾನಿಕ್ ಸಿಟಿ, ರಾಜಾಜಿನಗರ, ತುಮಕೂರು ಮೈಸೂರಿನ ಹಲವು ಕಡೆ ಕಚೇರಿಗಳಿಗೆ ಕರೆದೊಯ್ದು ಅವೆಲ್ಲವೂ ತನ್ನದೇ ಎಂದು ಹೇಳಿಕೊಂಡಿದ್ದ ಎಂದು ಆರೋಫಿಸಲಾಗಿದೆ. ದುಬೈ, ಗಾಂಬಿಯಾ, ಘಾನ, ಉದುಬಿತ್ಥಾನ, ಮಲೇಷ್ಯಾಗಳಲ್ಲಿ ಅಂತರಾಷ್ಟ್ರೀಯ ವ್ಯವಹಾರ ನನಗೆ ಇದೆ ಎಂಬುವುದಾಗಿಯೂ ನಂಬಿಸಿದ್ದ ಎನ್ನಲಾಗಿದೆ., ಟೆಸ್ಲಾ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ರ ಆಪ್ತ ಸಹ ತನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದಾನೆ ಎಂದು ಸುಳ್ಳಿನ ಮೇಲೆ ಸುಳ್ಳು ಹೇಳಿದ್ದ ಎಂಬುವುದಾಗಿ ನಿರ್ಮಾಪಕರ ವಿರುದ್ದ
ಉದ್ಯಮಿಗೆ ಕೆಲ ನಕಲಿ ಕರಾರು ಪತ್ರಗಳನ್ನು ನಿರ್ಮಾಪಕ ಅರುಣ್ ಮತ್ತು ಆತನ ಕೆಲವು ಸಹಚರರು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತಾನು ಮೋಸ ಹೋಗಿರುವುದು ತಿಳಿದ ನಂತರ ಬಂಟವಾಳದ ಉದ್ಯಮಿ ನಿರ್ಮಾಪಕ ಅರುಣ್ ರೈ, ಆತನ ಸಹೋದರ ಅರ್ಜುನ್ ರೈ, ಬನಶಂಕರಿ ರಘು, ಮುಳಬಾಗಿಲು ಗೋವಿಂದಪ್ಪ, ಕೆ.ಪಿ.ಶ್ರೀನಿವಾಸ್ ಎಂಬುವವರ ವಿರುದ್ದ ದೂರು ನೀಡಿದ್ದಾರೆ.