ಮುಂಬೈ, ಡಿ.08(DaijiworldNews/AA): ಸ್ಯಾಂಡಲ್ವುಡ್ ಸ್ಟಾರ್ ನಟ ಯಶ್ ಅವರ 'ಟಾಕ್ಸಿಕ್' ಸಿನಿಮಾದಲ್ಲಿ ಅನಿಲ್ ಕಪೂರ್ ಅವರು ನಟಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮುಂಬೈನಲ್ಲಿ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ನಡೆಯುತ್ತಿರುವ ಸ್ಥಳದಲ್ಲಿ ಕಿಯಾರಾ ಅಡ್ವಾಣಿಯೊಂದಿಗೆ ಅನಿಲ್ ಕಪೂರ್ ಕಾಣಿಸಿಕೊಂಡಿದ್ದಾರೆ. ಆ ಬಳಿಕ ಇಬ್ಬರೂ ಬೋಟ್ನಲ್ಲಿ ಕುಳಿತು ತೆರಳಿದ್ದಾರೆ. ಹಾಗಾಗಿ ಅನಿಲ್ ಕಪೂರ್ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.
ಅನಿಲ್ ಕಪೂರ್ ಅವರು 1983ರಲ್ಲಿ 'ಪಲ್ಲವಿ ಅನುಪಲ್ಲವಿ' ಸಿನಿಮಾದಲ್ಲಿ ಅನಿಲ್ ಕಪೂರ್ ನಟಿಸಿದ್ದರು. ಇದೀಗ 'ಟಾಕ್ಸಿಕ್'ನಲ್ಲಿ ಅನಿಲ್ ಕಪುರ್ ನಟಿಸಿದ್ದೇ ಆದರೆ ಬರೋಬ್ಬರಿ 41 ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ವುಡ್ಗೆ ಎಂಟ್ರಿ ನೀಡಿದಂತಾಗುತ್ತದೆ.