ಬೆಂಗಳೂರು,ಡಿ, 21(DaijiworldNews/AK): ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಯುಐ ಸಿನಿಮಾ ಇಂದು (ಡಿ.20) ಅದ್ಧೂರಿಯಾಗಿ ರಿಲೀಸ್ ಆಗಿದೆ. ರಿಲೀಸ್ ಆದ ಮೊದಲ ದಿನವೇ ಕರ್ನಾಟಕದಲ್ಲಿ ಯುಐ ಸಿನಿಮಾ 10 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ.
ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ UI ಬಹುಭಾಷೆಗಳಲ್ಲಿ ರಿಲೀಸ್ ಆಗಿ ಉತ್ತಮ ರೆಸ್ಪಾನ್ಸ್ ಪಡೆದಿದೆ. ಮೊದಲ ದಿನವೇ ಕರ್ನಾಟಕದಲ್ಲಿ 10 ಕೋಟಿ ರೂ. ಕಲೆಕ್ಷನ್ ಮಾಡಿದೆ. ಆಂಧ್ರ ಪ್ರದೇಶ, ತೆಲಂಗಾಣದಲ್ಲೂ ಹೌಸ್ಫುಲ್ ಪ್ರದರ್ಶನ ಕಂಡಿದೆ.
UI ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ತಲೆಗೆ ಉಪೇಂದ್ರ ಹುಳ ಬಿಟ್ಟಿದ್ದಾರೆ. ಚಿತ್ರದ ಕಥೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಳಗ್ಗೆ 6:30ರಿಂದಲೇ ಚಿತ್ರದ ಪ್ರದರ್ಶನ ಶುರುವಾಗಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಖುಷಿ ವ್ಯಕ್ತಪಡಿಸಿದ್ದಾರೆ.