ಚೆನ್ನೈ,ಡಿ.30(DaijiworldNews/AK):ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ಗೇಮ್ ಚೇಂಜರ್ ಬಿಡುಗಡೆಗೆ ಸಿದ್ದವಾಗಿದೆ.
ಇದೀಗ ಚೆರ್ರಿ ಅಭಿಮಾನಿಗಳು ಕೂಡ ‘ಗೇಮ್ ಚೇಂಜರ್’ ಸಿನಿಮಾ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದ್ದಾರೆ.

ಜ.10 ‘ಗೇಮ್ ಚೇಂಜರ್’ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್ನಲ್ಲಿ ರಾಮ್ಚರಣ್ ಅವರ 256 ಅಡಿ ಎತ್ತರದ ಕಟೌಟ್ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ. ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು.
ಈ ಹಿಂದೆ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್ ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದಿದ್ದು, 256 ಅಡಿ ಎತ್ತರದ ಕಟೌಟ್ ನಿಲ್ಲಿಸಿ ಸಂಭ್ರಮಿಸಲು ಸಜ್ಜಾಗಿದ್ದಾರೆ.