ಮಂಗಳೂರು, ಜ.06(DaijiworldNews/TA): ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ನ್ಯಾಷನಲ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿರುವಾಗಲೇ ಮಂಗಳೂರಿನಲ್ಲಿ ಯಶ್ ಕಾಣಿಸಿಕೊಂಡಿದ್ದು ಕುತೂಹಲ ಮೂಡಿಸಿದೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಯಶ್ ಮುಖಕ್ಕೆ ಮಾಸ್ಕ್ ಹಾಕಿ ತೆರಳುವ ದೃಶ್ಯ ಸಖತ್ ವೈರಲ್ ಆಗುತ್ತಿದೆ. ಟಾಕ್ಸಿಕ್ ಸಿನಿಮಾದ ಮುಂದಿನ ಶೆಡ್ಯೂಲ್ ಶೂಟಿಂಗ್ಗಾಗಿ ಲೊಕೇಶನ್ ನೋಡಲು ನಟ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ.
ಜ.8ರಂದು ಯಶ್ ಹುಟ್ಟುಹಬ್ಬದ ಹಿನ್ನೆಲೆ ‘ಟಾಕ್ಸಿಕ್’ ಕುರಿತು ಅಪ್ಡೇಟ್ ತಿಳಿಸೋದಾಗಿ ಅನೌನ್ಸ್ ಮಾಡಿದ್ದಾರೆ ಎನ್ನಲಾಗಿದೆ. ಅಂದೇ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಲುಕ್ ಅನಾವರಣ ಆಗಲಿದೆ ಎನ್ನಲಾಗಿದೆ. ಇದರ ನಡುವೆ ನಟ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.