ಬೆಂಗಳೂರು, ಫೆ.08 (DaijiworldNews/AA): ಸ್ಯಾಂಡಲ್ವುಡ್ ನಟ ದರ್ಶನ್ಗೆ ಫೆ.16ರಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಈ ಬಾರಿ ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ದರ್ಶನ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳಲಾ, ಥ್ಯಾಂಕ್ಸ್ ಹೇಳೋದಾ ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಅಂತ ಆಸೆ ಇತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಅಂತ ಫ್ಯಾನ್ಸ್ಗೆ ದರ್ಶನ್ ಮನವಿ ಮಾಡಿದ್ದಾರೆ.
ನಿಂತುಕೊಂಡು ಎಲ್ಲರಿಗೂ ವಿಶ್ ಮಾಡೋಕೆ ನನ್ನ ಕೈಯಲ್ಲಿ ಆಗಲ್ಲ. ಒಂದು ಇಂಜೆಕ್ಷನ್ ತೆಗೆದುಕೊಂಡಾಗ ಒಂದು 15-20 ದಿನ ಆರಾಮ ಆಗಿರುತ್ತೇನೆ. ಅದರ ಪವರ್ ಕಮ್ಮಿಯಾಗುತ್ತಿದ್ದಂತೆ ನೋವು ಶುರುವಾಗುತ್ತದೆ. ಆಪರೇಷನ್ ಅನ್ನೋದು ಕಟ್ಟಿಟ್ಟ ಬುಟ್ಟಿ. ಅದು ನನಗೂ ಗೊತ್ತು. ಅದನ್ನು ಮುಂದೆ ಮಾಡಿಸಲೇಬೇಕು ನಾನು. ಈಗ ಇರೋ ಕೆಲಸಗಳಲ್ಲಿ ಈಗಾಗಲೇ ಒಪ್ಪಿಕೊಂಡಿರೋದನ್ನು ಮಾಡಬೇಕಿದೆ. ನನ್ನ ನಿರ್ಮಾಪಕರಿಗೆ ಥ್ಯಾಂಕ್ಯೂ ಹೇಳ್ತೀನಿ. ಯಾಕೆಂದರೆ ಇಷ್ಟು ದಿನ ನನಗಾಗಿ ಕಾದಿದ್ದಾರೆ. ಅವರಿಗೆ ನಾನು ಅನ್ಯಾಯ ಮಾಡಬಾರದು ಅಂತ ಎಷ್ಟು ದಿನ ಸಾಧ್ಯವಾಗುತ್ತದೋ ಅಷ್ಟು ದಿನ ಆಪರೇಷನ್ ಮುಂದಕ್ಕೆ ಹಾಕಲು ನೋಡ್ತಾ ಇದ್ದೀನಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ತಿಳಿಸಿದ್ದಾರೆ.