ಬೆಂಗಳೂರು, ಫೆ.18 (DaijiworldNews/AK): ನಿಮ್ಮ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರು ಬೆಳಕು, ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

ಇಂದು ದರ್ಶನ್ ಅವರು 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಸೆಲೆಬ್ರಿಟಿಸ್ ಎಂದು ಕರೆದು ಪತ್ರ ಬರೆದಿದ್ದಾರೆ
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.