ಮುಂಬೈ, ಫೆ.27(DaijiworldNews/AK):ಸಲ್ಮಾನ್ ಖಾನ್ ನಟನೆಯ ಸಿನಿಮಾ ಅಂದರೆ ಭರ್ಜರಿ ಆ್ಯಕ್ಷನ್, ಪಂಚಿಂಗ್ ಡೈಲಾಗ್ ಇರಲೇಬೇಕು. ಅಂಥ ಎಲ್ಲ ನಿರೀಕ್ಷೆಗಳನ್ನು ಪೂರೈಸುವ ರೀತಿಯಲ್ಲಿ ‘ಸಿಕಂದರ್’ ಸಿನಿಮಾದ ಟೀಸರ್ ಮೂಡಿಬಂದಿದೆ.

ಇಂದು ‘ಸಿಕಂದರ್’ ಟೀಸರ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಲ್ಮಾನ್ ಖಾನ್ ಅವರು ಮಾಸ್ ಅವತಾರ ತಾಳಿದ್ದಾರೆ. ಫೈಟಿಂಗ್ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ. ಟೀಸರ್ ನೋಡಿದ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಖುಷಿ ಆಗಿದೆ. ಟೀಸರ್ ಕಂಡು ಬಗೆಬಗೆಯಲ್ಲಿ ಪ್ರತಿಕ್ರಿಯೆ ನೀಡಲಾಗುತ್ತಿದೆ.
ಎ.ಆರ್. ಮುರುಗದಾಸ್ ಅವರು ‘ಸಿಕಂದರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಭಾರಿ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ. ಅದರ ಝಲಕ್ ತೋರಿಸಲು ಈಗ ಟೀಸರ್ ಅನಾವರಣ ಮಾಡಲಾಗಿದೆ. ಒಂದು ಗ್ಯಾಪ್ ಬಳಿಕ ಸಲ್ಮಾನ್ ಖಾನ್ ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಹೀಗಾಗಿ ಸಿಕಂದರ್ ಟೀಸರ್ ನಿರೀಕ್ಷೆ ಅಭಿಮಾನಿಗಳಲ್ಲಿ ಹೆಚ್ಚಿಸಿದೆ.