ಬೆಂಗಳೂರು, ಮಾ.06(DaijiworldNews/AK): ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ತಮಿಳು ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ನಂದಮೂರಿ ಬಾಲಕೃಷ್ಣ ನಟನೆಯ ತೆಲುಗು ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದರು.

ಇದೀಗ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಮುಹೂರ್ತ ಇಂದಷ್ಟೆ ನಡೆದಿದ್ದು, ಸಿನಿಮಾದಲ್ಲಿ ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಲಾಗುವ ನಯನತಾರಾ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
2020ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದ್ದ ‘ಮೂಕುತ್ತಿ ಅಮ್ಮನ್’ ಸಿನಿಮಾದ ಮುಂದುವರೆದ ಭಾಗದಲ್ಲಿ ದುನಿಯಾ ವಿಜಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಆದರೆ ಈಗ ‘ಮೂಕುತ್ತಿ ಅಮ್ಮನ್ 2’ ಸಿನಿಮಾವನ್ನು ತಮಿಳು ಚಿತ್ರರಂಗದ ಜನಪ್ರಿಯ ನಟ, ನಿರ್ದೇಶಕ ಸುಂದರ್ ಸಿ ನಿರ್ದೇಶನ ಮಾಡುತ್ತಿದ್ದಾರೆ.