ಮುಂಬೈ, ಮಾ.15(DaijiworldNews/TA) : ಮಗಳು ರಾಹಾ ಸುರಕ್ಷತೆಗಾಗಿ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಂಪತಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಮಗಳ ಫೋಟೋವನ್ನು ಕ್ಲಿಕ್ಕಿಸಬೇಡಿ, ಒಂದು ವೇಳೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಲಿಯಾ ಪಾಪರಾಜಿಗಳಿಗೆ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.

ಮಾ.15ರಂದು ಆಲಿಯಾ ಭಟ್ರವರ 32ನೇ ಹುಟ್ಟುಹಬ್ಬ. ಈ ಹಿನ್ನೆಲೆ 2 ದಿನ ಮುಂಚಿತವಾಗಿ ಮಾಧ್ಯಮಗಳ ಜೊತೆ ಹುಟ್ಟುಹಬ್ಬವನ್ನು ನಟಿ ಆಚರಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ನಟಿ ಯಾರೂ ಕೂಡ ತಮ್ಮ ಮಗಳ ಫೋಟೋ ತೆಗೆಯಬಾರದು ಮತ್ತು ಅನಧಿಕೃತವಾಗಿ ಬಳಸಬಾರದು ಎಂದು ವಿನಂತಿಸಿದ್ದಾರೆ.
ಒಂದು ವೇಳೆ ಮಾತು ಕೇಳದೆ ಫೋಟೋ ತೆಗೆದರೆ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಟಿ ಎಚ್ಚರಿಕೆ ನೀಡಿದ್ದಾರೆ. ನಟಿಯ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.