ಹೈದರಾಬಾದ್, ಮಾ.21 (DaijiworldNews/AA): ತೆಲುಗು ನಟ ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸಲು ಬಾಲಿವುಡ್ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಅವರು 30 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ನಟಿಸಲು ಅವರು 30 ಕೋಟಿ ರೂ. ಸಂಭಾವನೆಗೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇದರೊಂದಿಗೆ ಒಂದು ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಭಾರತದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಸಿನಿಮಾಗಳಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದು, ಇದೀಗ ಮಹೇಶ್ ಬಾಬು ನಟನೆಯ 29ನೇ ಚಿತ್ರಕ್ಕೆ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈಗಾಗಲೇ ಒಡಿಶಾ, ವಿಶಾಖಪಟ್ಟಣಂ, ಹೈದರಾಬಾದ್ನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಶೂಟಿಂಗ್ ನಲ್ಲಿ ಪ್ರಿಯಾಂಕಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.