ಬೆಂಗಳೂರು, ಏ.19 (DaijiworldNews/AA): ಸ್ಯಾಂಡಲ್ವುಡ್ ನಟಿ ಅರ್ಚನಾ ಕೊಟ್ಟಿಗೆ ಸದ್ದಿಲ್ಲದೆ ಕ್ರಿಕೆಟರ್ ಒಬ್ಬರೊಂದಿಗೆ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಸ್ಯಾಂಡಲ್ವುಡ್ನಲ್ಲಿ ತನ್ನ ನಟನೆ ಮೂಲಕ ತನ್ನದೇ ಛಾಪು ಮೂಡಿಸಿರುವ ನಟಿ ಅರ್ಚನಾ ಕೊಟ್ಟಿಗೆ ಕರ್ನಾಟಕದ ಕ್ರಿಕೆಟರ್ ಶರತ್ ಬಿ.ಆರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕರ್ನಾಟಕ ಕ್ರಿಕೆಟ್ ತಂಡದ ಪ್ರಮುಖ ಆಟಗಾರನಾಗಿರುವ ಶರತ್ ಬಿ.ಆರ್ ರಣಜಿ ಹಾಗೂ ದೇಶಿಯ ಟೂರ್ನಿಯಲ್ಲಿ ಕರ್ನಾಟಕದ ಪರವಾಗಿ ಆಟವಾಡಿದ್ದಾರೆ. ಕಳೆದ ವರ್ಷ ಗುಜರಾತ್ ಟೈಟನ್ಸ್ ತಂಡದ ಆಟಗಾರನಾಗಿದ್ದ ಅವರು, ಬ್ಯಾಟ್ಸ್ಮನ್, ವಿಕೆಟ್ ಕೀಪರ್ ಆಗಿ ಗುರುತಿಸಿಕೊಂಡಿದ್ದಾರೆ.
ಕಳೆದ ಕೆಲ ಸಮಯದಿಂದ ಕಿಕೆಟರ್ ಶರತ್ ಬಿ.ಆರ್ ಹಾಗೂ ನಟಿ ಅರ್ಚನಾ ಕೊಟ್ಟಿಗೆ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಆತ್ಮೀಯರ ಸಮ್ಮುಖದಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ.