ಬೆಂಗಳೂರು, ಜು. 27 (DaijiworldNews/AK): ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ ಇದೀಗ ದರ್ಶನ್ ಅಭಿಮಾನಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ.

ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ʻಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್ಸ್ಟಾ ಸ್ಟೇಟಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಕಾಮೆಂಟ್ಸ್ ಮಾಡೋದರ ಜೊತೆಗೆ ಟ್ರೋಲ್ ಮಾಡಿದ್ರು. ಇದೀಗ ನಟಿ ರಮ್ಯಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.
ಮೊದಲ ಪೋಸ್ಟ್ನಲ್ಲಿ ʻಕೇಸ್ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರʼ ಎನ್ನುವ ʻತೆರೆಯ ಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ ಹಿರೋಯಿನ್ ರಮ್ಯಾ ಎಂದು ಬರೆಯಲಾಗಿದೆ. ಅಲ್ಲದೇ ರಮ್ಯಾ ಎರಡು ದಿನಗಳ ಹಿಂದೆ ಮಾಡಿದ ಪೋಸ್ಟ್ ಇದೆ. ಇದರೊಂದಿಗೆ ʻಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ. ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್ಗಳೇ ಸಾಕ್ಷಿʼ ಅಂತ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ.