ಬೆಂಗಳೂರು, ಆ. 6 (DaijiworldNews/AK): ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಅವರು ‘ಕಾಟೇರ’ ಸಿನಿಮಾ ಮೂಲಕ ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಈಗ ಅವರು ಎರಡನೇ ಸಿನಿಮಾಗೆ ಸಹಿ ಮಾಡಿದ್ದಾರೆ.

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಮೂಲಕ ತರುಣ್ ಶಿವಪ್ಪ ಅವರು ‘ನೆಕ್ಸ್ಟ್ ಲೆವೆಲ್’ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಗೆ ‘ರಿಯಲ್ ಸ್ಟಾರ್’ ಉಪೇಂದ್ರ ಅವರು ಹೀರೋ. ಅರವಿಂದ್ ಕೌಶಿಕ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಆರಾಧನಾ ರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.
ಇದು ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಆರಾಧನಾ ಅವರು ‘ಕಾಟೇರ’ ಸಿನಿಮಾದಲ್ಲಿ ನಟನೆಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈಗ ಅವರಿಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ನಟಿಸಿದ ಅವರು ಈಗ 2ನೇ ಸಿನಿಮಾದಲ್ಲಿಯೂ ಸ್ಟಾರ್ ಹೀರೋಗೆ ಜೋಡಿ ಆಗುತ್ತಿರುವುದು ವಿಶೇಷ.