ಬೆಂಗಳೂರು, 14(DaijiworldNews/AK): ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ ‘ಹಲಗಲಿ’ ಚಿತ್ರದ ಫಸ್ಟ್ ಲುಕ್ ಗುರುವಾರ ಸಂಜೆ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ.

ಅದಕ್ಕೂ ಮುನ್ನ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಮಾಡಿದೆ ಚಿತ್ರತಂಡ. ಆ ಗ್ಲಿಂಪ್ಸ್ ನಾನಾ ಅರ್ಥಗಳನ್ನು ನೀಡುತ್ತಿದೆ. ಡಾಲಿ ಅಭಿಮಾನಿಗಳು ಅದನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ.
ಬ್ರಿಟಿಷರ ವಿರುದ್ಧ ಮೊಟ್ಟ ಮೊದಲ ಗೆರಿಲ್ಲಾ ವಾರ್ ಮಾಡಿದ ಹಲಗಲಿ ವೀರರ ಕುರಿತು ಈ ಚಿತ್ರದಲ್ಲಿ ಡಾಲಿ ಅವರು ಬೇಡರ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಗ್ಲಿಂಪ್ಸ್ ಬಿಡುಗಡೆಗೂ ಮುನ್ನವೇ ಚಿತ್ರತಂಡ ಹಂಚಿಕೊಂಡಿರುವ ಈ ಎರಡೂ ಫೋಟೋಗಳು ಸಾಕಷ್ಟು ಕುತೂಹಲ ಮೂಡಿಸಿದೆ.
ಸುಕೇಶ್ ನಾಯಕ್ ನಿರ್ದೇಶನದ ಈ ಚಿತ್ರವನ್ನು ಕಲ್ಯಾಣ್ ಚಕ್ರವರ್ತಿ ಡಿ ಅವರು 80 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದಾರೆ. ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರುತ್ತಿರುವ ಚಿತ್ರ ಇದಾಗಿದೆ.