ಬೆಂಗಳೂರು, ಅ. 15 (DaijiworldNews/AA): ನಟಿ ರಚಿತಾ ರಾಮ್ ಕೊನೆಗೂ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ.
ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ ಕಾರ್ಯ ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಇದೀಗ ಮತ್ತೊಮ್ಮೆ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.