ಮುಂಬೈ, ನ. 07 (DaijiworldNews/AA): ಬಾಲಿವುಡ್ನ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನಿಸಿದ್ದು, ಇದೀಗ ಮಗುವನ್ನು ಈ ಜೋಡಿ ಅದ್ಧೂರಿಯಾಗಿ ಸ್ವಾಗತಿಸಿದೆ.

ಇಂದು ಈ ಸುದ್ದಿಯನ್ನ ವಿಕ್ಕಿ ಕೌಶಾಲ್ ಹಾಗೂ ಕತ್ರಿನಾ ಕೈಫ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ನ ಆಪ್ತರಾದ ಪ್ರಿಯಾಂಕ ಚೋಪ್ರಾ, ಕರಿನಾ ಕಪೂರ್, ಶ್ರೇಯಾ ಗೋಷಾಲ್ ಹಾಗೂ ಕತ್ರಿನಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ಬಾಲಿವುಡ್ ತಾರಾ ದಂಪತಿಯ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. 2021ರ ಡಿಸೆಂಬರ್ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ತಾರಾ ದಂಪತಿಗಳು ಇತ್ತೀಚೆಗೆ ಬೇಬಿ ಶೋವರ್ ಫೋಟೋಗಳನ್ನ ಹಂಚಿಕೊಂಡು ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಹಿ ನೀಡಿತ್ತು.